ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

‘ಅವರ ರಕ್ತದೊತ್ತಡ ಕಡಿಮೆಯಾಗಿದೆ. ಮೂತ್ರ ವಿಸರ್ಜಿಸಲೂ ಅವರಿಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಡಯಾಲಿಸಿಸ್‌ಗೆ ಒಳಪಡಿಸಲಾಗಿದೆ’ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ (ಎಸ್‌ಜಿಪಿಜಿಐಎಂಎಸ್) ಆಸ್ಪತ್ರೆಯ ನಿರ್ದೇಶಕ, ಪ್ರೊ ಆರ್.ಕೆ. ಧಿಮನ್ ಹೇಳಿದ್ದಾರೆ.

ಸದ್ಯ ಸಿಂಗ್ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ.

ಕಲ್ಯಾಣ್ ಸಿಂಗ್ ಅವರನ್ನು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲು ರಾಮ ಮನೋಹರ್ ಲೋಹಿಯಾ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎಸ್‌ಜಿಪಿಜಿಐಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.