ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಮಾ ಬದಲಿಗೆ ದೇಹ ಸೇರಿದ ಮೂಸಂಬಿ ರಸ: ಡೆಂಗಿ ರೋಗಿ ಸಾವು

Last Updated 20 ಅಕ್ಟೋಬರ್ 2022, 13:08 IST
ಅಕ್ಷರ ಗಾತ್ರ

ಪ್ರಯಾಗರಾಜ್‌: ಉತ್ತರ ಪ್ರದೇಶದ ಪ್ರಯಾಗರಾಜ್‌ (ಅಲಹಾಬಾದ್)ನಲ್ಲಿ ಡೆಂಗಿ ರೋಗಿಯೊಬ್ಬರ ದೇಹಕ್ಕೆ ಪ್ಲಾಸ್ಮಾ ನೀಡುವುದಕ್ಕೆ ಬದಲಾಗಿ ಮೂಸಂಬಿ ರಸ ನೀಡಲಾಗಿದ್ದು, ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದೆ. ದೇಹಕ್ಕೆ ಮೂಸಂಬಿ ರಸ ಸೇರಿದ ಕಾರಣಕ್ಕೆ ರೋಗಿ ಪ್ರದೀಪ್‌ ಪಾಂಡೆ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ನಕಲಿ ರಕ್ತನಿಧಿಗಳ ಅಕ್ರಮ ಬಯಲಾಗಿದೆ.

ಪ್ಲಾಸ್ಮಾ ಪೊಟ್ಟಣದಲ್ಲಿ ಮೂಸಂಬಿ ರಸ ಇರುವುದನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಅಧಿಕಾರಿಗಳು ಪ್ರಕರಣದ ತನಿಖೆ ಪ್ರಾರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಗುರುವಾರ ತಿಳಿಸಿದ್ದಾರೆ. ‘ಕೆಲವೇ ಗಂಟೆಗಳಲ್ಲಿ ಪರೀಕ್ಷಾ ವರದಿ ಬರಲಿದೆ. ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಪಾಠಕ್ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲ್ಲಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ. ಡೆಂಗಿ ನಿಯಂತ್ರಣ ಮತ್ತು ತಡೆಗಟ್ಟುವಿಕೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್‌ಗೆ ಸೂಚಿಸಿತ್ತು. ಲಖನೌ ಪೀಠವು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣದ ಬಗ್ಗೆ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಈ ಮಧ್ಯೆ, ಮೂಸಂಬಿ ರಸ ನೀಡಿದ ಕಾರಣಕ್ಕೆ ರೋಗಿಯೊಬ್ಬರು ಕೊನೆಯುಸಿರೆಳೆದಿರುವುದು ಸರ್ಕಾರಕ್ಕೆ ನಡುಕ ಹುಟ್ಟಿಸಿದೆ.

ಉತ್ತರ ಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ 2021 ರಲ್ಲಿ ಕ್ರಮವಾಗಿ 29,750, 23,389 ಮತ್ತು 20,749 ಡೆಂಗಿಪ್ರಕರಣಗಳು ದಾಖಲಾಗಿವೆ. 2021 ರಲ್ಲಿ ದೇಶದಾದ್ಯಂತ ಒಟ್ಟು 1.93 ಲಕ್ಷ ಪ್ರಕರಣಗಳು ವರದಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT