ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Uttar Pradesh Politics: ಯೋಗಿ ಆದಿತ್ಯನಾಥ್ ಸಂಪುಟಕ್ಕೆ ನಾಲ್ವರ ಸೇರ್ಪಡೆ

ಆರ್‌ಎಲ್‌ಡಿ, ಎಸ್‌ಬಿಎಸ್‌ಪಿಯ ತಲಾ ಒಬ್ಬರು, ಬಿಜೆಪಿಯ ಇಬ್ಬರಿಗೆ ಒಲಿದ ಸಚಿವ ಸ್ಥಾನ
Published 5 ಮಾರ್ಚ್ 2024, 14:28 IST
Last Updated 5 ಮಾರ್ಚ್ 2024, 14:28 IST
ಅಕ್ಷರ ಗಾತ್ರ

ಲಖನೌ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಹೊಸದಾಗಿ ನಾಲ್ವರನ್ನು ಸಂಪುಟಕ್ಕೆ ತೆಗೆದುಕೊಂಡಿದ್ದಾರೆ. 

ಎಸ್‌ಬಿಎಸ್‌ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜಭರ್, ಆರ್‌ಎಲ್‌ಡಿಯ ಅನಿಲ್ ಕುಮಾರ್ ಮತ್ತು ಬಿಜೆಪಿಯ ಸುನೀಲ್ ಕುಮಾರ್ ಶರ್ಮಾ ಮತ್ತು ದಾರಾ ಸಿಂಗ್ ಚೌಹಾಣ್‌ ಅವರಿಗೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಪ್ರಮಾಣವಚನ ಬೋಧಿಸಿದರು. 

ಯೋಗಿ ಆದಿತ್ಯನಾಥ್ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ತನ್ನ ನೆಲೆ ಭದ್ರಪಡಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿರುವ ಭಾಗವಾಗಿ ಸಂಪುಟ ವಿಸ್ತರಣೆ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಆರ್‌ಎಲ್‌ಡಿ ಮತ್ತು ಎಸ್‌ಬಿಎಸ್‌ಪಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT