ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ವಿಕಾಸ್‌ ದುಬೆ ಆಪ್ತ ಸಹಾಯಕನ ಆಸ್ತಿ ಬಗ್ಗೆ ತನಿಖೆ ನಡೆಸಲು ಆಗ್ರಹ

Last Updated 28 ಜುಲೈ 2020, 4:10 IST
ಅಕ್ಷರ ಗಾತ್ರ

ಲಖನೌ: ಎನ್‌ಕೌಂಟರ್‌ನಲ್ಲಿ ಹತನಾದ ರೌಡಿ ಶೀಟರ್‌ ವಿಕಾಸ್‌ ದುಬೆಯ ಆಪ್ತ ಸಹಾಯಕ ಜೈ ವಾಜಪೇಯಿಆಕ್ರಮ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉತ್ತರ ಸರ್ಕಾರ ಒತ್ತಾಯಿಸಿದೆ.

‍ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಸರ್ಕಾರ ವಿನಂತಿಸಿದೆ.

ಗ್ಯಾಂಗ್‌ಸ್ಟರ್‌ ವಿಕಾಸ್‌ ದುಬೆ, ಜುಲೈ 11 ರಂದು ನಡೆದಿದ್ದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ.

ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ ದುಬೆಯನ್ನು ಬಂಧಿಸಲು ಜುಲೈ 2 ರಂದು ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ಹೋಗಿದ್ದ ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆದು ಎಂಟು ಮಂದಿ ಪೊಲೀಸರು ಹತರಾಗಿದ್ದರು. ಪ್ರಮುಖ ಆರೋಪಿ ದುಬೆ ಬಳಿಕ ತಲೆಮರೆಸಿಕೊಂಡಿದ್ದ. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನನ್ನು ಮಧ್ಯಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ಬಂಧಿಸಿ ಉತ್ತರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಇದೀಗ ಪೊಲೀಸರು ದುಬೆ ಸಹಚರರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT