ಲಖನೌ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶ ರಾಜಧಾನಿ ಲಖನೌ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಕಡ್ಡಾಯಗೊಳಿಸಿದೆ.

ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಲ್ಲಿ ಪರಿಣಾಮ ಬೀರಿದ್ದನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರವು ಈ ಕ್ರಮ ಕೈಗೊಂಡಿದೆ. ಈ ಪ್ರಕಾರ ಗೌತಂ ಬುದ್ಧ ನಗರ, ಗಾಜಿಯಾಬಾದ್, ಹಪುರ್, ಮೀರಠ್, ಬುಲಂದ್ಶಹರ್, ಬಾಘ್ಪತ್ ಹಾಗೂ ರಾಜಧಾನಿ ಲಖನೌನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಎಂದು ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಗೌತಂ ಬುದ್ಧ ನಗರದಲ್ಲಿ 65, ಗಾಜಿಯಾಬಾದ್ನಲ್ಲಿ 20 ಹಾಗೂ ಲಖನೌನಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಪರಿಸ್ಥಿತಿ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.