ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ವಾದ್ರಾ ಒತ್ತಾಯಿಸಿದ್ದಾರೆ.

ಲಖನೌದಲ್ಲಿ ಯುವ ಪತ್ರಕರ್ತ ನೀಲಾಂಶು ಶುಲ್ಕಾ ಅವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಿಯಾಂಕ ವಾದ್ರಾ ಅವರು ‘ಪತ್ರಕರ್ತರಿಗೆ ವಿಮಾ ಸೌಲಭ್ಯ ಕಲ್ಪಿಸಿ’ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಈ ವಿಷಯವನ್ನು ನಾನು ಈ ಮೊದಲೇ ಪ್ರಸ್ತಾಪಿಸಿದ್ದೆ. ಈಗಲೂ ಹೇಳುತ್ತಿದ್ದೇನೆ. ಕೊರೊನಾ ಸೋಂಕು ಹರಡುತ್ತಿರುವ ಸಮಯದಲ್ಲಿ ಪತ್ರಕರ್ತರು ಸಕಾಲದಲ್ಲಿ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಮೃತ ಪತ್ರಕರ್ತ ನೀಲಾಂಶು ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಮತ್ತು ಎಲ್ಲ ಪತ್ರಕರ್ತರಿಗೂ ವಿಮಾ ಸೌಲಭ್ಯ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.