ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ಕಾರು- ಟ್ರಕ್ ಡಿಕ್ಕಿ: ವರ ಸೇರಿ ನಾಲ್ವರ ಸಾವು

Published 11 ಮೇ 2024, 11:04 IST
Last Updated 11 ಮೇ 2024, 11:04 IST
ಅಕ್ಷರ ಗಾತ್ರ

ಝಾನ್ಸಿ (ಉತ್ತರ ಪ್ರದೇಶ): ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವರ ಸೇರಿ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪರಿಚ್ಚಾ ಪ್ರದೇಶದ ಬಳಿ ನಡೆದಿದೆ.

ಶುಕ್ರವಾರ ರಾತ್ರಿ ವರ ಸೇರಿದಂತೆ ಆರು ಮಂದಿ ಕಾರಿನಲ್ಲಿ ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

'ಬಿಲಾಟಿ ಗ್ರಾಮದಿಂದ ಛಪ್ರಾ ಗ್ರಾಮಕ್ಕೆ ಬರುತ್ತಿದ್ದಾಗ ಹಿಂದಿನಿಂದ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಆದರೆ ಆ ವೇಳೆಗಾಗಲೇ ವರ ಸೇರಿದಂತೆ ನಾಲ್ವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

ಆಕಾಶ್ ಅಹಿರ್ವಾರ್ (25), ಅವರ ಸಹೋದರ ಆಶಿಶ್ (20), ಸೋದರಳಿಯ ಮಯಾಂಕ್ (7) ಮತ್ತು ಕಾರು ಚಾಲಕ ಜೈಕಾರನ್ ಮೃತರು.

ಇನ್ನಿಬ್ಬರು ಸಂಬಂಧಿಕರಾದ ರವಿ ಅಹಿರ್ವಾರ್ ಮತ್ತು ರಮೇಶ್ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಜ್ಞಾನೇಂದ್ರ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT