ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ: ವಿಚಾರಣೆ ಮುಂದೂಡಿಕೆ

Published 22 ಏಪ್ರಿಲ್ 2024, 13:55 IST
Last Updated 22 ಏಪ್ರಿಲ್ 2024, 13:55 IST
ಅಕ್ಷರ ಗಾತ್ರ

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಮೇ 2ಕ್ಕೆ ಮುಂದೂಡಿತು.

ರಾಹುಲ್‌ ಗಾಂಧಿ ಅವರ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರ ‍ಪ್ರಕಾರ, ‘ಇಂದು ವಿಚಾರಣೆ ನಿಗದಿ ಆಗಿತ್ತು. ಆದರೆ, ನ್ಯಾಯಾಧೀಶರ ನಿಯೋಜನೆ ಆಗದ ಕಾರಣ ವಿಚಾರಣೆ ನಡೆಯಲಿಲ್ಲ’ ಎಂದರು. 

ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಅವರು 2018ರ ಆಗಸ್ಟ್ 4ರಂದು ಈ ಮೊಕದ್ದೆಮೆ ದಾಖಲಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಕೋರ್ಟ್‌ ರಾಹುಲ್‌ ಗಾಂಧಿ ಅವರಿಗೆ ವಾರಂಟ್ ನೀಡಿತ್ತು. ಕೋರ್ಟ್‌ಗೆ ಹಾಜರಾಗಿದ್ದ ಅವರಿಗೆ ಬಳಿಕ ಜಾಮೀನು ಮಂಜೂರು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT