ಸೋನ್ಭದ್ರ (ಉತ್ತರಪ್ರದೇಶ): ಶ್ರೀರಾಮನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ದೃಶ್ಯವೊಂದನ್ನು ಹಾಕಿದ್ದ 22 ವರ್ಷದ ವ್ಯಕ್ತಿಯನ್ನು ಸೋಮವಾರ ಸೋನ್ಭದ್ರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರಜ್ ಜಾಟವ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಕ್ಷೇಪಾರ್ಹ ವಿಡಿಯೊ ಹಾಕಿದ್ದ ಬಗ್ಗೆ ಭಾನುವಾರ ಬಂದಿದ್ದ ದೂರು ಆಧರಿಸಿ ಬಂಧಿಸಲಾಗಿದೆ ಎಂದು ಓಬ್ರಾ ವೃತ್ತ ಪೊಲೀಸ್ ಅಧಿಕಾರಿ ಹರ್ಷ ಪಾಂಡೆ ಮಾಹಿತಿ ನೀಡಿದ್ದಾರೆ.

‘ರಾಮನ ಬಗ್ಗೆ ತಪ್ಪಾಗಿ ಚಿತ್ರಿಸಿದ್ದ ದೃಶ್ಯ ಮತ್ತು ಪೋಸ್ಟ್ನ ಬರಹವು ಹಿಂದೂ ಧರ್ಮಕ್ಕೆ ಅಗೌರವ ತರುವಂತಿತ್ತು. ಹಿಂದೂ ಸಮುದಾಯದ ಭಾವನೆ ಕೆರಳಿಸುವಂತಿತ್ತು’ ಎಂದು ಅಧಿಕಾರಿ ತಿಳಿಸಿದ್ದಾರೆ. ಕೋಮು ಸಾಮರಸ್ಯ ಮತ್ತು ಸಾರ್ವಜನಿಕ ಶಾಂತಿ ಕದಡುವ ಉದ್ದೇಶ ಹೊಂದಿದ ಕಾರಣಕ್ಕೆ ಜಾಟವ್ ವಿರುದ್ಧ ಕ್ರಮ ಜರುಗಿಸಲಾಗಿದೆ. ಬಿಎನ್ಎಸ್ (ಭಾರತೀಯ ನ್ಯಾಯ ಸಂಹಿತಾ) ಕಾಯ್ದೆಯ ಸೆಕ್ಷನ್ 196, 299 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.