ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಉಗ್ರರ ದಾಳಿ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

Published 30 ಅಕ್ಟೋಬರ್ 2023, 10:49 IST
Last Updated 30 ಅಕ್ಟೋಬರ್ 2023, 10:49 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು (ಸೋಮವಾರ) ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ರಾಜ್‌ಪೋರಾ ಪ್ರದೇಶದಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಮುಖೇಶ್ ಸಿಂಗ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ. ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಉಗ್ರರು ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿ ತೀವ್ರವಾಗಿ ಗಾಯಗೊಳಿಸಿದ್ದರು.

ಕುಪ್ವಾರದಲ್ಲಿ ಉಗ್ರನ ಹತ್ಯೆ: ಗಡಿ ನುಸುಳುವಿಕೆ ಯತ್ನ ವಿಫಲ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಉಗ್ರರ ಗಡಿ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಸೇನೆ ಹಾಗೂ ಪೊಲೀಸರು ಒಬ್ಬ ಭಯೋತ್ಪಾದಕನನ್ನು ಹತ್ಯೆಗೈದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಿನ್ನೆ ಆರಂಭವಾದ ಜಂಟಿ ಕಾರ್ಯಾಚರಣೆಯಲ್ಲಿ, ಸೇನೆ ಮತ್ತು ಕುಪ್ವಾರ ಪೊಲೀಸರು ಕೆರಾನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT