ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮ ಮಂದಿರ ಉದ್ಘಾಟನೆ: ಡ್ರೋನ್‌ಗಳು, 10,000 ಸಿಸಿಟಿವಿ ಕ್ಯಾಮೆರಾ ಅಳವಡಿಕೆ

Published 12 ಜನವರಿ 2024, 14:07 IST
Last Updated 12 ಜನವರಿ 2024, 14:07 IST
ಅಕ್ಷರ ಗಾತ್ರ

ಲಖನೌ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭದ್ರತೆ ಖಚಿತಪಡಿಸುವ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಭದ್ರತೆಯ ಹೊಣೆ ಹೊತ್ತಿರುವ ಎಸ್‌ಪಿ ಗೌರವ್ ವಾನ್‌ಸ್ವಾಲ್ ತಿಳಿಸಿದ್ದಾರೆ.

ಅಯೋಧ್ಯೆ ಜಿಲ್ಲೆಯಾದ್ಯಂತ 10,000 ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಇದರ ಜೊತೆಗೆ ಆಧುನಿಕ ತ'ತ್ರಜ್ಞಾನ ಉಪಕರಣಗಳನ್ನು ಸಹ ಪೊಲೀಸರಿಗೆ ನೆರವಾಗುವ ದೃಷ್ಟಿಯಿಂದ ಅಳವಡಿಸಲಾಗುತ್ತಿದೆ ಎಂದು ಡಿಜಿ(ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಮಂದಿರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸ್ವಚ್ಛಗೊಳಿಸಲಾಗಿದ್ದು, ಒತ್ತುವರಿ ತೆರವು ಮಾಡಲಾಗಿದೆ. 17ರಿಂದ ಬೃಹತ್ ವಾಹನಗಳ ಮಾರ್ಗ ಬದಲಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ರೈಲು ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಸದಾ ಪೊಲೀಸರ ಉಪಸ್ಥಿತಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT