ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಚುನಾವಣೆ: ಉತ್ತರಪ್ರದೇಶದಲ್ಲಿ ಬಿಜೆಪಿ 8ನೇ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Published 15 ಫೆಬ್ರುವರಿ 2024, 11:28 IST
Last Updated 15 ಫೆಬ್ರುವರಿ 2024, 11:28 IST
ಅಕ್ಷರ ಗಾತ್ರ

ಲಖನೌ: ರಾಜ್ಯಸಭಾ ಚುನಾವಣೆಗೆ ಬಿಜೆಯಿಂದ 8ನೇ ಅಭ್ಯರ್ಥಿಯಾಗಿ ಸಂಜಯ್‌ ಸೇಠ್‌ ಅವರು ಉತ್ತರಪ್ರದೇಶದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸಮಾಜವಾದಿ ಪಕ್ಷದ ಮಾಜಿ ನಾಯಕರಾಗಿದ್ದ ಇವರು, 2019ರಲ್ಲಿ ಬಿಜೆಪಿಗೆ ಸೇರಿದ್ದರು.

ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ, ಪಕ್ಷದ ರಾಜ್ಯಾಧ್ಯಾಕ್ಷ ಭೂಪೇಂದ್ರ ಚೌಧರಿ ಮತ್ತು ಇನ್ನಿತರ ಹಿರಿಯ ನಾಯಕರ ಸಮ್ಮುಖದಲ್ಲಿ ಸಂಜಯ್‌ ಸೇಠ್‌ ನಾಮಪತ್ರ ಸಲ್ಲಿಸಿದ್ದಾರೆ.

ಉತ್ತರಪ್ರದೇಶದಲ್ಲಿ 10 ರಾಜ್ಯಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈವರೆಗೆ 8 ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಸಮಾಜವಾದಿ ಪಕ್ಷದಿಂದ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಂದು (ಗುರುವಾರ) ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು. ಫೆ. 27ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT