ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಸಾವು

Published : 17 ಸೆಪ್ಟೆಂಬರ್ 2024, 16:32 IST
Last Updated : 17 ಸೆಪ್ಟೆಂಬರ್ 2024, 16:32 IST
ಫಾಲೋ ಮಾಡಿ
Comments

ಫಿರೋಜಾಬಾದ್‌ (ಉತ್ತರಪ್ರದೇಶ): ಇಲ್ಲಿನ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಪ್ರದೇಶದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಗಾಯಗೊಂಡಿದ್ದಾರೆ. ಕಾರ್ಖಾನೆ ಸಮೀಪದ ಹತ್ತಾರು ಮನೆಗಳಿಗೂ ಹಾನಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಮೀರಾದೇವಿ (45), ಅಮನ್ ಕುಶ್ವಾಹ (17), ಗೌತಮ್ ಕುಶ್ವಾಹ (16), ಕುಮಾರಿ ಇಚ್ಛಾ (4) ಹಾಗೂ ಅಭಿನಯೆ (2) ಮೃತಪಟ್ಟಿದ್ದಾರೆ. ಎರಡೂ ಮಕ್ಕಳು ಒಡಹುಟ್ಟಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮರಣೋತ್ತರ ಪರೀಕ್ಷೆಯ ನಂತರ ಮೃತ ದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಸೋಮವಾರ ರಾತ್ರಿ 10.30ರ ಸುಮಾರಿಗೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಕಟ್ಟಡದ ಗೋಡೆಗಳು ಕುಸಿದು ಏಳು ಜನರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ.

ಮೃತ ಮಹಿಳೆ ಮೀರಾ ದೇವಿ ಅವರ ಪುತ್ರ ಪವನ್ ಕುಶ್ವಾಹ ಎಂಬವರು ನೀಡಿದ ದೂರಿನ ಮೇಲೆ ಪಟಾಕಿ ತಯಾರಿಸಿ ಮಾರಾಟ ಮಾಡುತ್ತಿದ್ದ ಭೂರೆ ಖಾನ್‌ ಮತ್ತು ಅವರ ಇಬ್ಬರು ಪುತ್ರರಾದ ತಾಜ್ ಮತ್ತು ರಾಜಾ ವಿರುದ್ಧ ಬಿಎನ್‌ಎಸ್ ಮತ್ತು ಸ್ಫೋಟಕ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶಿಕೋಹಾಬಾದ್‌ ಠಾಣೆಯ ಅಧಿಕಾರಿ ಪ್ರದೀಪ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT