ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಪುರದಲ್ಲಿ ಮಾರ್ಚ್ 15ರಂದು RSS ಸಭೆ: ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ

Published 8 ಮಾರ್ಚ್ 2024, 11:03 IST
Last Updated 8 ಮಾರ್ಚ್ 2024, 11:03 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಸ್‌ಎಸ್‌ನ ಅಖಿಲ ಭಾರತ 'ಪ್ರತಿನಿಧಿ' ಸಭೆಯು ಮುಂದಿನವಾರ ನಾಗಪುರದಲ್ಲಿ ನಡೆಯಲಿದ್ದು, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಮೂರು ದಿನಗಳ ಈ ಸಭೆಯು ಮಾರ್ಚ್‌ 15ರಂದು ಆರಂಭವಾಗಲಿದೆ. ಸದ್ಯ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರು ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಬೆಂಗಳೂರಿನಲ್ಲಿ 2021ರಲ್ಲಿ ನಡೆದ ಪ್ರತಿನಿಧಿ ಸಭೆಯಲ್ಲಿ ಅವರನ್ನು ಮೂರು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿತ್ತು.

ಪ್ರಧಾನ ಕಾರ್ಯದರ್ಶಿ ಸ್ಥಾನದ ಜೊತೆಗೆ, ಸಂಘಟನೆಯ ವಿವಿಧ ರಾಜ್ಯ ಘಟಕಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿ ಸ್ಥಾನಗಳಿಗೂ ಇದೇ ವೇಳೆ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹಾಗೂ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ದತ್ತಾತ್ರೇಯ ಹೊಸಬಾಳೆ ಹಾಗೂ ಸಂಘಟನೆಯ ಎಲ್ಲ ಜಂಟಿ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT