ನವದೆಹಲಿ: ಭಾರತಕ್ಕೆ ಬರುವ ಮೊದಲು ಅಂತರರಾಷ್ಟ್ರೀಯ ಪ್ರಯಾಣಿಕರು ತಮ್ಮ ಕೋವಿಡ್ ಲಸಿಕೆ ಪ್ರಮಾಣಪತ್ರ ಅಥವಾ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಯ ಪ್ರತಿಯನ್ನು ಏರ್ ಸುವಿಧಾ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕಾದ ನಿಬಂಧನೆಯನ್ನು ತೆಗೆದುಹಾಕಲು ಸರ್ಕಾರ ಚಿಂತಿಸುತ್ತಿದೆ.

ಆದರೆ, ಆನ್‌ಲೈನ್ ಪೋರ್ಟಲ್‌ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸ್ವಯಂ ಘೋಷಣೆ ಅರ್ಜಿಯನ್ನು ಭರ್ತಿ ಮಾಡುವ ಆದೇಶವು ಮುಂದುವರಿಯುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಲು ಹಾಗೂ ಪ್ರಮಾಣಪತ್ರಗಳ ಪ್ರತಿಗಳನ್ನು ಅಪ್‌ಲೋಡ್ ಮಾಡಲು ತೊಂದರೆಯಾಗುತ್ತಿರುವ ಬಗ್ಗೆ ಪ್ರಯಾಣಿಕರು ದೂರು ನೀಡಿದ್ದಾರೆ.ನಿಬಂಧನೆಯನ್ನು ತೆಗೆದುಹಾಕುವುದರಿಂದ ಅವರಿಗೆ ಅನುಕೂಲವಾಗಬಹುದು ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.