ನವದೆಹಲಿ: ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದೇಶದ ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಈ ಸಮೀಕ್ಷೆಯು ದೇಶದ ಮುಖ್ಯಮಂತ್ರಿಗಳ ಜನಪ್ರಿಯತೆಯನ್ನು ಅಳೆಯುವ ಗುರಿಯನ್ನು ಹೊಂದಿದ್ದು, ಕೆಲವು ಕುತೂಹಲಕಾರಿ ಅಂಶಗಳನ್ನು ಅನಾವರಣಗೊಳಿಸಿದೆ.

ಒಡಿಶಾದ ಸಿಎಂ ಪಟ್ನಾಯಕ್ ಅವರು ಶೇ. 52.7 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಶೇ. 51.3 ರೇಟಿಂಗ್‌ನೊಂದಿಗೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.

ಶೇ 48.6 ರೇಟಿಂಗ್‌ನೊಂದಿಗೆ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮೂರನೇ ಸ್ಥಾನದಲ್ಲಿದ್ದರೆ, ಶೇ 42.6 ರೇಟಿಂಗ್‌ನೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಶೇ 41.4 ರೇಟಿಂಗ್‌ನೊಂದಿಗೆ ತ್ರಿಪುರಾ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ ಐದನೇ ಸ್ಥಾನದಲ್ಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.