ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ: ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ 14,624 ಅಭ್ಯರ್ಥಿಗಳು

Published 12 ಜೂನ್ 2023, 7:34 IST
Last Updated 12 ಜೂನ್ 2023, 7:34 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕಳೆದ ತಿಂಗಳ 28ರಂದು ನಡೆಸಿದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು ಒಟ್ಟು 14,624 ಮಂದಿ ಮುಖ್ಯಪರೀಕ್ಷೆಗೆ ಅರ್ಹರಾಗಿದ್ದಾರೆ. 

ಮುಖ್ಯಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಗಳ ಪಟ್ಟಿಯನ್ನು ಯುಪಿಎಸ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಎಲ್ಲ ಅಭ್ಯರ್ಥಿಗಳು ಮುಖ್ಯಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಬೇಕು ಎಂದು ಯುಪಿಎಸ್‌ಸಿ ಈ ಕುರಿತು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ ಕುರಿತಂತೆ ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ಅಭ್ಯರ್ಥಿಗಳು ಬೆಳಿಗ್ಗೆ 10 ರಿಂದ ಸಂಜೆ 5ರ ಅವಧಿಯಲ್ಲಿ ಕಚೇರಿಯಲ್ಲಿ ನೇರವಾಗಿ ಅಥವಾ ದೂರವಾಣಿ ಸಂಖ್ಯೆ 011-23385271, 011-23098543 ಅಥವಾ 011-23381125ಕ್ಕೆ ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ.

ಕೇಂದ್ರ ನಾಗರಿಕ ಸೇವೆಗಳಾದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಹುದ್ದೆಗಳ ಭರ್ತಿಗೆ ಮೂರು ಅಂದರೆ –ಪೂರ್ವಭಾವಿ, ಮುಖ್ಯಪರೀಕ್ಷೆ ಮತ್ತು ಸಂದರ್ಶನ–ಹಂತಗಳಲ್ಲಿ ಯುಪಿಎಸ್‌ಸಿಯು ಪರೀಕ್ಷೆಯನ್ನು ನಡೆಸಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT