ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: 13 ಸಾವಿರ ಅಭ್ಯರ್ಥಿಗಳು ಉತ್ತೀರ್ಣ

Last Updated 22 ಜೂನ್ 2022, 14:34 IST
ಅಕ್ಷರ ಗಾತ್ರ

ನವದೆಹಲಿ: 2022ನೇ ಸಾಲಿನ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಯಲ್ಲಿ 13,090 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇದರ ಫಲಿತಾಂಶಗಳನ್ನು ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಬುಧವಾರwww.upsc.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪೂರ್ವಭಾವಿ ಪರೀಕ್ಷೆ ಇದೇ ಜೂನ್ 5ರಂದು ನಡೆದಿತ್ತು.ಸುಮಾರು 11.52 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, 13,090 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟು 861 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಹುದ್ದೆಗಳ ಸಂಖ್ಯೆಯನ್ನು 1,022ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT