ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ | ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

Last Updated 4 ಮೇ 2020, 21:02 IST
ಅಕ್ಷರ ಗಾತ್ರ

ನವದೆಹಲಿ: ಮೇ 31ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ತಿಳಿಸಿದೆ. ಎರಡನೇ ಹಂತದಲಾಕ್‌ಡೌನ್‌ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಗವು ಸೋಮವಾರ ನಡೆಸಿದ ಸಭೆಯಲ್ಲಿ ಈನಿರ್ಧಾರ ತೆಗೆದುಕೊಂಡಿದೆ.

‘ಹಲವೆಡೆ ನಿರ್ಬಂಧಗಳನ್ನು ಮುಂದುವರಿಸಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಅಥವಾ ಸಂದರ್ಶನ ನಡೆಸಲು ಸಾಧ್ಯವಿಲ್ಲ. ಹೀಗಾಗಿ, ಮೇ 31ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಲಾಗಿದೆ’ ಎಂದು ಯುಪಿಎಸ್‌ಸಿ ಪ್ರಕಟಣೆಯಲ್ಲಿ ಹೇಳಿದೆ.

‘ಪರೀಕ್ಷೆಯ ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ಕನಿಷ್ಠ 30 ದಿನ ಮುಂಚಿತವಾಗಿಯೇ ತಿಳಿಸಲಾಗುವುದು’ ಎಂದು ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT