ಕೋಲ್ಕತ್ತ: ಯೋಜನಾರಹಿತ ನಗರೀಕರಣ ಮತ್ತು ಮರಗಳ ನಾಶದಿಂದಾಗಿ ದೇಶದಲ್ಲಿ ಸಿಡಿಲು ಬಡಿತ ಹೆಚ್ಚಿದ್ದು, ಪರಿಣಾಮವಾಗಿ ಸಾವು–ನೋವಿನ ಸಂಖ್ಯೆಯೂ ಹೆಚ್ಚಾಗಿದೆ ಎಂದು ಪುಣೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮಿಟಿಯೊರಾಲಜಿಯ (ಐಐಟಿಎಂ) ಹಿರಿಯ ಹವಾಮಾನ ತಜ್ಞ ಡಾ. ಎಸ್.ಡಿ.ಪವಾರ್ ತಿಳಿಸಿದ್ದಾರೆ.

ಈಚಿನ ದಿನಗಳಲ್ಲಿ ಭಾರತದ ಗ್ರಾಮೀಣ ಪ್ರದೇಶಕ್ಕಿಂತಲೂ, ನಗರ ಪ್ರದೇಶದಲ್ಲಿ ಸಿಡಿಲು ಬಡಿತ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಸಿಡಿಲು ಬಡಿತದಿಂದಾಗಿ ಪ್ರತಿವರ್ಷ ಸುಮಾರು 3,500 ಸಾವುಗಳು ಸಂಭವಿಸುತ್ತಿವೆ. ಆದರೆ, ಕಳೆದ ಐದು ವರ್ಷಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಿದೆ. ಈ ಬಾರಿ ಮಧ್ಯ ಹಿಮಾಲಯದ ತಪ್ಪಲು ಮತ್ತು ದೇಶದ ಪೂರ್ವ ಭಾಗದಲ್ಲಿ ಸಿಡಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಸಿಡಿಲು ಬಡಿತದಿಂದ ಮೃತಪಟ್ಟವರ ಸಂಖ್ಯೆಯ ಬಗ್ಗೆ ಅಧಿಕೃತ ದಾಖಲೆಗಳಿಲ್ಲ. ಆದರೆ, ಕಳೆದ ಇಪ್ಪತ್ತು ವರ್ಷಗಳ ಅಧ್ಯಯನದ ಪ್ರಕಾರ, ಸಾವು–ನೋವಿನ ಸಂಖ್ಯೆ ಖಂಡಿತವಾಗಿಯೂ ಹೆಚ್ಚಿದೆ ಎಂದು ಹೇಳಿದ್ದಾರೆ.

ಜಾಗತಿಕ ತಾಪಮಾನ ಹೆಚ್ಚಳ, ಪರಿಸರ ಮಾಲಿನ್ಯ, ಬಯಲು ಪ್ರದೇಶಗಳಲ್ಲಿ ರಸ್ತೆಯಂತಹ ಮೂಲ ಸೌಕರ್ಯಗಳ ನಿರ್ಮಾಣ, ಹಸಿರಿನ ಕೊರತೆ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.