ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರಕ್ಕೆ ತೀಕ್ಷ್ಣವಾದ ಮತ್ತು ಕಠಿಣವಾದ ಪ್ರಶ್ನೆಗಳನ್ನು ಕೇಳಬೇಕೆಂದು ಸಂಸದರು ಮತ್ತು ರಾಜಕೀಯ ನಾಯಕರನ್ನು ಒತ್ತಾಯಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರಕ್ಕೂ ಪ್ರತಿಕ್ರಿಯಿಸಲು ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿದರು.

ಸೋಮವಾರ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ’ಇಡೀ ಜಗತ್ತನ್ನು ಕಾಡುತ್ತಿರುವ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕೆಂದು ಬಯಸುತ್ತೇನೆ’ ಎಂದು ಹೇಳಿದರು.

ಇದೇ ವೇಳೆ, ಕೋವಿಡ್ ಸಾಂಕ್ರಾಮಿಕದ ಬೆಳವಣಿಗೆ ಕುರಿತು ಸಮಗ್ರವಾಗಿ ಚರ್ಚಿಸಲು ಮಂಗಳವಾರ ಸಂಜೆ ಸ್ವಲ್ಪ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವಂತೆ ಸಂಸತ್ತಿನ ಎರಡೂ ಸದನಗಳ ಮುಖಂಡರನ್ನು ಒತ್ತಾಯಿಸುವುದಾಗಿಯೂ ಹೇಳಿದರು.

ಸಂಸತ್ತಿನ ಒಳಗೆ ಮತ್ತು ಹೊರಗೆ ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚಿಸಬೇಕೆಂದು ಸಂಸದರನ್ನು ಒತ್ತಾಯಿಸಿದ ಮೋದಿಯವರು, ಈ ಸಂದರ್ಭದಲ್ಲಿ ದೇಶದ ಜನರ ಎಲ್ಲ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲು ಸರ್ಕಾರ ಸಿದ್ಧವಾಗಿದೆ’ ಎಂದು ಮೋದಿ ಸ್ಪಷ್ಪಪಡಿಸಿದರು.

’ಸಂಸತ್ ಅಧಿವೇಶನದಲ್ಲಿ ತೀಕ್ಷ್ಣ ಮತ್ತು ಕಠಿಣ ಪ್ರಶ್ನೆಗಳನ್ನು ಕೇಳಬೇಕೆಂದು ನಾನು ವಿನಂತಿಸುತ್ತೇನೆ. ಸೌಹಾರ್ದ ವಾತಾವರಣದಲ್ಲಿ ಸರ್ಕಾರ ಪ್ರತಿಕ್ರಿಯಿಸಲು ಕೂಡ ಅವಕಾಶ ನೀಡಬೇಕು’ ಎಂದು ಮೋದಿ ಹೇಳಿದರು.

’ಜನರಿಗೆ ಸತ್ಯ ತಿಳಿಸುವ ಮೂಲಕ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇದು ಜನರ ವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯ ವೇಗವನ್ನು ಸುಧಾರಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.