ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಒಬ್ಬನನ್ನು ಹತ್ಯೆ ಮಾಡಿದೆ. ಶರಣಾದ ಮತ್ತೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಶ್ರೀನಗರದ ರಾಜೌರಿಕದಲ್ ಪ್ರದೇಶದಲ್ಲಿ ಉಗ್ರರ ಅಡಗುತಾಣ ನಿರ್ಮಿಸಲು ಲಷ್ಕರ್ ಎತೈಬಾ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ಸತರ್‌ಗುಂಡ್‌ನ ಆದೇಶ ಮಾಡಿದ್ದಾಗಿ ವಿಚಾರಣೆ ವೇಳೆ ಉಗ್ರ ಬಾಯ್ಬಿಟ್ಟಿದ್ದಾನೆ. ಪೊಲೀಸರಿಗೆ ಅಡಗುತಾಣವನ್ನು ತೋರಿಸಿಕೊಟ್ಟಿದ್ದಾನೆ.

ಆದರೆ ಪೊಲೀಸರು ಭೇಟಿ ನೀಡಿದಾಗ ಅಡಗುತಾಣ ಖಾಲಿಯಿರುವುದು ಕಂಡುಬಂದಿದೆ. ಕಟ್ಟಡಕ್ಕೆ ಸಂಬಂಧಿಸಿದ ಮಾಲೀಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೂರ್ವ ಲಡಾಖ್ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ, ಆಧುನಿಕ ತಂಗುದಾಣಗಳ ಸ್ಥಾಪನೆ

ಉರಿ ಸೆಕ್ಟರ್‌ನಲ್ಲಿ ಮಂಗಳವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ಪುಲ್ವಾಮ ಪೊಲೀಸರು ಮತ್ತು 50 ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಜೋನ್ ಪೊಲೀಸ್ ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.