ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೇಜಸ್ ಖರೀದಿಗೆ ಅಮೆರಿಕ, ಆಸ್ಟ್ರೇಲಿಯಾ ಸೇರಿ 6 ದೇಶಗಳ ಆಸಕ್ತಿ: ಕೇಂದ್ರ ಸರ್ಕಾರ

Last Updated 5 ಆಗಸ್ಟ್ 2022, 15:37 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ತೇಜಸ್‌ ಯುದ್ಧವಿಮಾನ ಖರೀದಿಗೆ ಅಮೆರಿಕ, ಆಸ್ಟ್ರೇಲಿಯಾ, ಇಂಡೋನೇಷ್ಯಾ ಮತ್ತು ಫಿಲಿಪ್ಪೀನ್ಸ್‌ ಸೇರಿ ಆರು ದೇಶಗಳು ಆಸಕ್ತಿ ತೋರಿವೆ. ಮಲೇಷ್ಯಾ ಈಗಾಗಲೇ ತೇಜಸ್‌ ಅನ್ನು ತನ್ನ ಸೇನೆಗೆ ಸೇರ್ಪಡೆ ಮಾಡಿಕೊಳ್ಳಲು ಬಹುತೇಕ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಅರ್ಜೆಂಟಿನಾ ಮತ್ತು ಈಜಿಪ್ಟ್‌ ಸಹ ತೇಜಸ್‌ ಖರೀದಿಗೆ ಆಸಕ್ತಿ ವ್ಯಕ್ತಪಡಿಸಿವೆ ಎಂದು ರಕ್ಷಣಾ ಇಲಾಖೆ ರಾಜ್ಯ ಸಚಿವ ಅಜಯ್‌ ಭಟ್‌ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಅಭಿವೃದ್ಧಿಪಡಿಸಿರುವತೇಜಸ್‌, ಒಂದೇ ಎಂಜಿನ್‌ ಇರುವ ಬಹುಪಯೋಗಿ ಯುದ್ಧ ವಿಮಾನವಾಗಿದೆ. ಇದು ಅತ್ಯಂತ ಅಪಾಯಕಾರಿ ವಾಯು ಪರಿಸರದಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಇಂಥ 83 ಹಗುರ ಯುದ್ಧ ವಿಮಾನ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಕಳೆದ ವರ್ಷ ಎಚ್‌ಎಎಲ್‌ನೊಂದಿಗೆ ₹48,000 ಕೋಟಿ ಮೊತ್ತದ ಒಪ್ಪಂದ ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT