ನವದೆಹಲಿ: ಲಸಿಕೆಯ ಕಚ್ಚಾಸಾಮಗ್ರಿಗಳ ರಫ್ತು ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ, ಲಸಿಕೆ ಉತ್ಪಾದನೆಯ ಮೇಲೆ ಪರಿಣಾಮ ಬೀರಿದ್ದು, ಕೊರತೆಗೂ ಕಾರಣವಾಗಿದೆ ಎಂದು ಸಿಪಿಎಂ ಆರೋಪಿಸಿದೆ.

ಈ ಕುರಿತು ಹೇಳಿಕೆ ನೀಡಿರು ಪಕ್ಷದ ಪಾಲಿಟ್‌ಬ್ಯೂರೊ, ಜೋ ಬೈಡನ್ ನೇತೃತ್ವದ ಅಮೆರಿಕ ಆಡಳಿತದ ಈ ನಿಲುವು ಅದರ ದ್ವಂದ್ವ ನಿಲುವಿಗೆ ನಿದರ್ಶನವಾಗಿದೆ ಎಂದು ಟೀಕಿಸಿದೆ.

‘ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಧಕ್ಕೆಯಾಗಿದೆ. ಅಗತ್ಯ ಪ್ರಮಾಣದ ಕಚ್ಚಾ ಸಾಮಗ್ರಿಗಳ ಕೊರತೆ ಇದಕ್ಕೆ ಕಾರಣ. ಪ್ರಮುಖವಾಗಿ ಬೇಕಿರುವ ಫಿಲ್ಟರ್,ಸೊಲ್ಯೂಷನ್,ಪ್ಲಾಸ್ಟಿಕ್ ಬ್ಯಾಗ್‌ಗಳು ಅಮೆರಿಕದಿಂದಲೇ ಬರಬೇಕಿದೆ. ಆದರೆ, ರಕ್ಷಣಾ ಉತ್ಪನ್ನಗಳ ಕಾಯ್ಡೆಯಡಿ ಅಮೆರಿಕ ಇವುಗಳ ರಫ್ತಿಗೆ ನಿರ್ಬಂಧ ಹೇರಿದೆ’ ಎಂದಿದೆ.

ಭಾರತ ಕ್ವಾಡ್ ಸದಸ್ಯ ರಾಷ್ಟ್ರವಾಗಿ ಪ್ರಧಾನಿ ನರೇಂದ್ರ ಮೋದಿ ಈ ಸಮಸ್ಯೆಯತ್ತ ಗಮನಹರಿಸಿ, ಅಗತ್ಯ ಕಚ್ಚಾ ಸಾಮಗ್ರಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ. ಭಾರತವಲ್ಲದೆ, ಅಮೆರಿಕ, ಆಸ್ಟ್ರೇಲಿಯ, ಜಪಾನ್ ಕ್ವಾಡ್ ಸಮೂಹದ ಇತರ ಸದಸ್ಯ ರಾಷ್ಟ್ರಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.