ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕ ವಿದೇಶಾಂಗ ಉಪ ಕಾರ್ಯದರ್ಶಿ ಭಾರತ ಭೇಟಿ

Published 17 ಫೆಬ್ರುವರಿ 2024, 15:44 IST
Last Updated 17 ಫೆಬ್ರುವರಿ 2024, 15:44 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅಮೆರಿಕ ವಿದೇಶಾಂಗ ಇಲಾಖೆಯ ಉಪ ಕಾರ್ಯದರ್ಶಿ ರಿಚರ್ಡ್‌ ವರ್ಮಾ ಫೆಬ್ರುವರಿ 18ರಿಂದ 23ರವರೆಗೆ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ.

ವರ್ಮಾ ಅವರು ವಿದೇಶಾಂಗ ಇಲಾಖೆಯಲ್ಲಿ ಎರಡನೇ ಹಿರಿಯ ಸ್ಥಾನದಲ್ಲಿದ್ದಾರೆ. ಈ ಅವಧಿಯಲ್ಲಿ ಅವರು ಉಭಯ ದೇಶಗಳ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಭಾರತದಲ್ಲಿ ಅವರು, ಹಿರಿಯ ಅಧಿಕಾರಿಗಳು, ಉದ್ಯಮಿಗಳ ಜೊತೆಗೆ ಭಾರತ ಅಮೆರಿಕ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚಿಸುವರು. ಬಳಿಕ ಮಾಲ್ದೀವ್ಸ್‌ ಹಾಗೂ ಶ್ರೀಲಂಕಾಗೆ ಭೇಟಿ ನೀಡುವರು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT