‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಜೋ ಬೈಡನ್ ಅವರು ಉಭಯ ದೇಶಗಳ ನಡುವಿನ ವೀಸಾ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಚುರುಕುಗೊಳಿಸಲು ಮಹತ್ವಾಕಾಂಕ್ಷೆಯ ಗುರಿ ಹೊಂದಿದ್ದಾರೆ. ರಾಯಭಾರ ಕಚೇರಿಯಲ್ಲಿನ ನಮ್ಮ ಕಾನ್ಸುಲರ್ ತಂಡಗಳು ಮತ್ತು ನಾಲ್ಕು ದೂತಾವಾಸಗಳು, ಹೆಚ್ಚುತ್ತಿರುವ ವೀಸಾ ಬೇಡಿಕೆಯನ್ನು ಈಡೇರಿಸಲು ಅವಿರತವಾಗಿ ಕೆಲಸ ಮಾಡುತ್ತಿವೆ’ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದರು.