ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಕುರಿತು ಆಗುತ್ತಿರುವ ಬೆಳವಣಿಗೆಗಳು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಅವಲೋಕನ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಮೆರಿಕದ ಸುಪ್ರೀಂ ಕೋರ್ಟ್ ಶುಕ್ರವಾರ ಸುಂಕಗಳ ಕುರಿತು ನೀಡಿರುವ ತೀರ್ಪನ್ನು ನಾವು ಗಮನಿಸಿದ್ದೇವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ವಿಷಯದ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಅಮೆರಿಕ ಆಡಳಿತವು ಸುಂಕದ ವಿಚಾರವಾಗಿ ಕೆಲವು ಕ್ರಮಗಳನ್ನು ಘೋಷಿಸಿದೆ. ಈ ಎಲ್ಲ ಬೆಳವಣಿಗೆಗಳು ಮತ್ತು ಬೀರಬಹುದಾದ ಪರಿಣಾಮಗಳ ಬಗ್ಗೆ ಅವಲೋಕನ ನಡೆಸುತ್ತಿದ್ದೇವೆ’ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಂಪ್ ಅವರ ಜಾಗತಿಕ ಸುಂಕದ ನೀತಿಯು ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಟ್ರಂಪ್ ವಿಧಿಸಿದ ಸುಂಕಗಳು ಕಾನೂನುಬಾಹಿರ ಮತ್ತು ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿವೆ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

2025ರ ಆಗಸ್ಟ್ನಲ್ಲಿ ಅಮೆರಿಕವು ಭಾರತದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸಿತ್ತು. ಬಳಿಕ ರಷ್ಯಾದ ತೈಲ ಖರೀದಿಸಿದ್ದಕ್ಕಾಗಿ ಹೆಚ್ಚುವರಿ ಶೇಕಡ 25ರಷ್ಟು ಸುಂಕ ಹೇರಿತ್ತು. ಇತ್ತೀಚೆಗೆ ಎರಡೂ ರಾಷ್ಟ್ರಗಳು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ ಅಮೆರಿಕವು ಭಾರತದ ಮೇಲಿನ ಸುಂಕವನ್ನು ಶೇ 18ಕ್ಕೆ ಇಳಿಸಲು ಒಪ್ಪಿಕೊಂಡಿತ್ತು.

ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ, 2026ರ ಫೆಬ್ರುವರಿ 24ರಿಂದ ಜಾರಿಗೆ ಬರುವಂತೆ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 150 ದಿನಗಳ ಅವಧಿಗೆ ಶೇ 10ರಷ್ಟು ತಾತ್ಕಾಲಿಕ ಆಮದು ಸುಂಕ ವಿಧಿಸುವುದಾಗಿ ಟ್ರಂಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.