ನವದೆಹಲಿ: ಭಾರತದಿಂದ ಆಮದು ಆಗುವ ಸರಕುಗಳಿಗೆ ವಿಧಿಸುತ್ತಿದ್ದ ಶೇಕಡ 25ರಷ್ಟು ಸುಂಕವನ್ನು ಶೇ 18ಕ್ಕೆ ಇಳಿಸಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಘೋಷಿಸಿದ್ದರು. ಅಮೆರಿಕ ಸುಂಕ ಕಡಿತಗೊಳಿಸಿದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ‘ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 140 ಕೋಟಿ ಜನರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

‘ನನ್ನ ಆತ್ಮೀಯ ಗೆಳೆಯ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಇಂದು ಮಾತನಾಡಿ ಸಂತೋಷವಾಯಿತು. ಭಾರತದಲ್ಲಿ ತಯಾರಾದ ಉತ್ಪನ್ನಗಳು ಈಗ ಶೇಕಡ 25ರ ಬದಲು ಶೇಕಡ 18ರಷ್ಟು ಸುಂಕವನ್ನು ಹೊಂದುತ್ತಿರುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 140 ಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಇದರಿಂದ ಹೆಚ್ಚು ಅವಕಾಶಗಳು ದೊರೆಯುತ್ತವೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದೂ ಮೋದಿ ಹೇಳಿದ್ದಾರೆ.

ನಮ್ಮ ಪಾಲುದಾರಿಕೆಯನ್ನು ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ಯಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದೂ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯಾಪಾರ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ರಷ್ಯಾದ ತೈಲ ಖರೀದಿಯನ್ನು ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇಂದು ಟ್ರಂಪ್ ತಮ್ಮ ಘೋಷಣೆಯ ವೇಳೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಷಯವನ್ನು ಮಾತ್ರವಲ್ಲದೆ ಭಾರತ ರಷ್ಯಾದ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ತೈಲ ಖರೀದಿ ಮಾಡಲಿದೆ ಎಂದು ಕೂಡ ಹೇಳಿದ್ದರು. ಆದರೆ, ಈ ಬಗ್ಗೆ ಭಾರತ ಸರ್ಕಾರದಿಂದ ಯಾವುದೇ ಸ್ಪಷ್ಟನೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.