ಬೆಂಗಳೂರು: ಅಮೆರಿಕ ವೀಸಾ ಪಡೆಯಲು ಅರ್ಜಿ ಸಲ್ಲಿಸಿರುವವರು ತಕ್ಷಣದಿಂದಲೇ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ‘ಅನ್ಲಾಕ್’ ಮಾಡುವ ಮೂಲಕ ಸಾರ್ವಜನಿಕ ಪರಿಶೀಲನೆಗೆ ಮುಕ್ತಗೊಳಿಸಬೇಕು ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸೋಮವಾರ ತಿಳಿಸಿದೆ.

ವಲಸೆಯೇತರ ‘ಎಫ್’, ‘ಎಂ’ ಅಥವಾ ‘ಜೆ’ ವೀಸಾಗಳಿಗೆ ಅರ್ಜಿ ಸಲ್ಲಿಸಿರುವ ಎಲ್ಲರೂ ಅಮೆರಿಕದ ಕಾನೂನಿನಡಿ ತಮ್ಮ ಗುರುತುಗಳನ್ನು ಬಹಿರಂಗಪಡಿಸಬೇಕು. ತಮ್ಮ ಎಲ್ಲ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ಗೋಪ್ಯತೆಯ ಸೆಟ್ಟಿಂಗ್ಗಳನ್ನು ತಕ್ಷಣದಿಂದ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ರಾಯಭಾರ ಕಚೇರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನೀಡುವ ಪ್ರಕ್ರಿಯೆಯನ್ನು ಪುನರಾರಂಭಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದ ಅಮೆರಿಕ, ಅರ್ಜಿದಾರರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ‘ಅನ್ಲಾಕ್’ ಮಾಡಬೇಕು ಎಂದು ಹೇಳಿತ್ತು.

‘ವೀಸಾಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರ ಸಾಮಾಜಿಕ ಮಾಧ್ಯಮ ಖಾತೆಗಳು ಪರಿಶೀಲನೆಗೆ ಒಳಗಾಗಲಿವೆ. ಅರ್ಜಿದಾರರ ಖಾತೆಗಳನ್ನು ಸಚಿವಾಲಯದ ಅಧಿಕಾರಿಗಳು ಪರಿಶೀಲಿಸುತ್ತಾರೆ. ಅಮೆರಿಕದ ಮೂಲ ತತ್ವಗಳು, ಸರ್ಕಾರ, ಸಂಸ್ಕೃತಿ, ಸಂಸ್ಥೆಗಳಿಗೆ ಸಂಬಂಧಿಸಿದಂತೆ ಅರ್ಜಿದಾರರ ಸಂದೇಶಗಳ ಬಗ್ಗೆ ನಿಗಾವಹಿಸುತ್ತಾರೆ’ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.