ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಸ್‌ಸಿಐಆರ್‌ಎಫ್‌ ಪಕ್ಷಪಾತಿ: ಭಾರತ

Published 2 ಮೇ 2024, 16:39 IST
Last Updated 2 ಮೇ 2024, 16:39 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಗಂಭೀರ ಉಲ್ಲಂಘನೆಗಳಾಗಿವೆ ಎಂದಿರುವ ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದ (ಯುಎಸ್‌ಸಿಐಆರ್‌ಎಫ್‌) ವಿರುದ್ಧ ತೀಕ್ಷಣವಾಗಿ ಪ್ರತಿಕ್ರಿಯಿಸಿರುವ ಭಾರತ, ಅದು ನಿರ್ದಿಷ್ಟ ರಾಜಕೀಯ ಕಾರ್ಯಸೂಚಿಯೊಂದಿಗೆ ಕೆಲಸ ಮಾಡುವ ಪಕ್ಷಪಾತದಿಂದ ಕೂಡಿದ ಸಂಸ್ಥೆಯಾಗಿದೆ ಎಂದಿದೆ.

‘ಯುಎಸ್‌ಸಿಐಆರ್‌ಎಫ್‌ ತನ್ನ ವಾರ್ಷಿಕ ವರದಿಯಲ್ಲಿ ಭಾರತದ ವಿರುದ್ಧ ಅಪಪ್ರಚಾರ ಮಾಡಲು ಯತ್ನಿಸಿದೆ. ಆ ಮೂಲಕ ಅದು ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದೆ’ ಎಂದು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಭಾರತದ ವೈವಿಧ್ಯಮಯ, ಬಹುತ್ವ ಮತ್ತು ಪ್ರಜಾಸತ್ತಾತ್ಮಕ ನೀತಿಗಳನ್ನು ಯುಎಸ್‌ಸಿಐಆರ್‌ಎಫ್‌ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತದೆ ಎಂಬ ಯಾವ ನಿರೀಕ್ಷೆಯನ್ನೂ ನಾವು ಹೊಂದಿಲ್ಲ ಎಂದು ಅವರು ಪ್ರತಿಕ್ರಿಯಿಸಿದರು.

ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವ ಅವರ ಪ್ರಯತ್ನಗಳು ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಜೈಸ್ವಾಲ್‌ ಹೇಳಿದರು.

ಯುಎಸ್‌ಸಿಐಆರ್‌ ಇತ್ತೀಚೆಗೆ ಬಿಡುಗಡೆ ಮಾಡಿದ್ದ ತನ್ನ ವಾರ್ಷಿಕ ವರದಿಯಲ್ಲಿ, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಯಾಗುತ್ತಿದೆ ಎಂದು ಟೀಕಿಸಿತ್ತು. ಅಲ್ಲದೆ ಭಾರತವನ್ನೂ ‘ನಿರ್ದಿಷ್ಟ ಕಾಳಜಿಯ ದೇಶ’ವೆಂದು ಘೋಷಿಸುವಂತೆ ಅಮೆರಿಕದ ವಿದೇಶಾಂಗ ಇಲಾಖೆಗೆ ಶೀಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT