ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ | ರಸ್ತೆ ಅಪಘಾತ; ಮೂವರು ಸಾವು, ಇಬ್ಬರಿಗೆ ಗಾಯ

Published 26 ಮಾರ್ಚ್ 2024, 4:15 IST
Last Updated 26 ಮಾರ್ಚ್ 2024, 4:15 IST
ಅಕ್ಷರ ಗಾತ್ರ

ಬುದೌನ್‌ (ಉ.ಪ್ರದೇಶ): ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದು, ಮಹಿಳೆ ಮತ್ತು ಮಗು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಸೌಲಿ ರಸ್ತೆಯಲ್ಲಿರುವ ಇಸ್ಲಾಂನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಚಿಚೆಟಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮಮೋಹನ್‌ ಸಿಂಗ್‌ ಹೇಳಿದ್ದಾರೆ.

ಸಂಜು ಮತ್ತು ಅಜಯ್‌ ಅವರಿದ್ದ ಮೋಟಾರ್‌ಬೈಕ್‌ ಪ್ರಮೋದ್‌, ಅವರ ಪತ್ನಿ ಗೀತಾ ಹಾಗೂ ಒಂದೂವರೆ ವರ್ಷದ ಮೊಮ್ಮಗಳು ಆಶಿ ಅವರನ್ನು ಕರೆದೊಯ್ಯುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಂಜು, ಅಜಯ್‌ ಮತ್ತು ಪ್ರಮೋದ್‌ ಮೃತಪಟ್ಟಿದ್ದಾರೆ. ಗೀತಾ ಮತ್ತು ಆಶಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಇಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT