ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಕಾರಿಗೆ ಟ್ರಕ್ ಡಿಕ್ಕಿ; 6 ಮಂದಿ ಸಾವು

Last Updated 23 ಜನವರಿ 2023, 2:25 IST
ಅಕ್ಷರ ಗಾತ್ರ

ಉನ್ನಾವ್: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಚಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ-ಕಾನ್ಪುರ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಅಪಘಾತ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಸ್ವಲ್ಪ ದೂರದವರೆಗೆ ಎಳೆದೊಯ್ಯಲ್ಪಟ್ಟ ಕಾರು ಮಹಿಳೆ ಮತ್ತು ಆಕೆಯ ಮಗಳಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಶಂಕರ್ ಮೀನಾ ತಿಳಿಸಿದ್ದಾರೆ.

ಇಬ್ಬರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಛೋಟೆಲಾಲ್ (32), ಶಿವಾಂಗ್ (30), ವಿಮಲೇಶ್ (60), ರಾಮ್‌ಪ್ಯಾರಿ (45) ಮತ್ತು ಆಕೆಯ ಮಗಳು ಶಿವಾನಿ (13) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಮೃತದೇಹದ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ.

ಅಪಘಾತದ ಬಳಿಕ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿದರು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉನ್ನಾವ್ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT