ಲಖನೌ: ನೀತಿ ಆಯೋಗದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ (ಎಂಪಿಐ) ಉತ್ತರ ಪ್ರದೇಶವು ಅತ್ಯಂತ ಕಳಪೆ ಸ್ಥಾನದಲ್ಲಿದೆ ಎಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಯಾದವ್,'ನೀತಿ ಆಯೋಗದ ಮೊದಲಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಅತ್ಯಂತ ಕಳಪೆ ಸ್ಥಾನದಲ್ಲಿರುವ ಮೂರು ರಾಜ್ಯಗಳ ಪೈಕಿ, ಬಿಜೆಪಿ ಆಡಳಿತವಿರುವಉತ್ತರ ಪ್ರದೇಶವೂ ಒಂದಾಗಿದೆ. ಅತಿಹೆಚ್ಚು ಅಪೌಷ್ಠಿಕತೆ ಇರುವ ರಾಜ್ಯಗಳ ಪಟ್ಟಿಯಲ್ಲಿಯೂ ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ. ಮಕ್ಕಳು ಮತ್ತು ಯುವಕರ ಮರಣ ದರದಲ್ಲಿ ಅತ್ಯಂತ ಕೆಳ ಸ್ಥಾನದಲ್ಲಿದೆ. ಇವು ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತಗಳು' ಎಂದು ದೂರಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿಯ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ.

ನೀತಿ ಆಯೋಗದ ಎಂಪಿಐ ಸೂಚ್ಯಂಕದ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶವು ದೇಶದಲ್ಲೇ ಅತ್ಯಂತ ಕಳಪೆ ಸ್ಥಾನದಲ್ಲಿರುವ ರಾಜ್ಯಗಳಾಗಿವೆ.

ಇದನ್ನೂ ಓದಿ:ಉತ್ತರ ಪ್ರದೇಶ ಸಿಎಂ ಆಯ್ಕೆ: 24ರಂದು ಬಿಜೆಪಿ ಶಾಸಕಾಂಗ ಪಕ್ಷ ಸಭೆ

ಸೂಚ್ಯಂಕದ ಪ್ರಕಾರ ಬಿಹಾರದ ಶೇ 51.91 ರಷ್ಟು ಜನರು ಬಡವರಾಗಿದ್ದಾರೆ. ಈ ಪ್ರಮಾಣವು ಜಾರ್ಖಂಡ್‌ನಲ್ಲಿ ಶೇ 42.16 ಮತ್ತು ಉತ್ತರ ಪ್ರದೇಶದಲ್ಲಿ ಶೇ 37.79 ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.