ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಅಖಿಲೇಶ್ ಸ್ಪರ್ಧಿಸಿದರೆ, ಅವರಿಗೆ ಇದು ಮೊದಲ ವಿಧಾನಸಭೆ ಚುನಾವಣೆ ಇದಾಗಲಿದೆ.

ಅಖಿಲೇಶ್ ಅವರು ಈಗ ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿರುವ ಆಜಂಗಡದ ವ್ಯಾಪ್ತಿಯಲ್ಲಿರುವ ಗೋಪಾಲಪುರ ವಿಧಾನಸಭೆ ಕ್ಷೇತ್ರದಿಂದ ಅಖೀಲೇಶ್ ಸ್ಪರ್ಧಿಸಲಿದ್ದಾರೆ ಎಂದು ಎಸ್‌ಪಿ ಮೂಲಗಳು ತಿಳಿಸಿವೆ. ಈ ಕ್ಷೇತ್ರವು ಉತ್ತರ ಪ್ರದೇಶದ ಪೂರ್ವಾಂಚಲ ಪ್ರದೇಶದಲ್ಲಿದೆ.

ಕ್ಷೇತ್ರ ಆಯ್ಕೆಯ ಕುರಿತು ಅಖೀಲೇಶ್ ಯಾವ ಸುಳಿವನ್ನೂ ನೀಡಿಲ್ಲ. ಆದರೆ ಅವರು ಪೂರ್ವಾಂಚಲ ಪ್ರದೇಶದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗೋರಖಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅದು ಕೂಡಾ ಪೂರ್ವಾಂಚಲ ಪ್ರದೇಶದ ಒಂದು ಕ್ಷೇತ್ರ. ಅಖಿಲೇಶ್ ಕೂಡಾ ಪೂರ್ವಾಂಚಲ ಪ್ರದೇಶದ ಕ್ಷೇತ್ರದಿಂದಲೇ ಸ್ಪರ್ಧಿಸಿದರೆ, ನಮ್ಮ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ಧನಾತ್ಮಕ ಸಂದೇಶ ನೀಡಿದಂತಾಗುತ್ತದೆ’ ಎಂದು ಎಸ್‌ಪಿಯ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕಳೆದ ಐದು ವಿಧಾನಸಭಾ ಚುನಾವಣೆಗಳಲ್ಲಿ ಗೋಪಾಲಪುರ ಕ್ಷೇತ್ರದಲ್ಲಿಎಸ್‌ಪಿ ನಾಲ್ಕು ಬಾರಿ ಗೆದ್ದಿದೆ. ಹೀಗಾಗಿ ಈ ಕ್ಷೇತ್ರವನ್ನು ಎಸ್‌ಪಿಯ ಸುರಕ್ಷಿತ ಕ್ಷೇತ್ರ ಎಂದು ಪರಿಗಣಿಸಲಾಗಿದೆ. 2017ರ ಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿ ನಫೀಸ್ ಅಹಮದ್ ಅವರು 15 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು.

ಅಖಿಲೇಶ್ ಸ್ಪರ್ಧೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವುದಕ್ಕಾಗಿ ಜಿಲ್ಲೆಯ ಮುಖಂಡರ ಜೊತೆ ಪಕ್ಷದ ನಾಯಕರು ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಬಯಸಿದರೆ ಸ್ಪರ್ಧಿಸುತ್ತೇನೆ ಎಂದು ಅಖಿಲೇಶ್ ಹೇಳಿದ್ದರು. ಯೋಗಿ ಆದಿತ್ಯನಾಥ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸದೇ ಇದ್ದರೆ ಅಖಿಲೇಶ್ ಕೂಡಾ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ನಾಯಕರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.