ಲಖನೌ:‘ಉತ್ತರ ಪ್ರದೇಶದಲ್ಲಿ ಸಕ್ರಿಯವಾಗಿದ್ದಅಲ್ ಕೈದಾ ಉಗ್ರ ಸಂಘಟನೆಯ ಘಟಕವೊಂದನ್ನು ಪತ್ತೆ ಮಾಡಿದ್ದೇವೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದೇವೆ. ಅವರಿಂದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ’ ಎಂದು ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ಪಡೆ ಭಾನುವಾರ ಹೇಳಿದೆ.

ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಮಿನಾಜ್ ಅಹ್ಮದ್ ಮತ್ತು ಮುಶ್ರುದ್ದೀನ್ ಅಲಿಯಾಸ್ ಮುಶೀರ್ ಎಂದು ಗುರುತಿಸಲಾಗಿದೆ.

‘ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜ್ಯದ ರಾಜಧಾನಿಯ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ನಡೆಸಲು ಇವರು ಸಂಚು ರೂಪಿಸಿದ್ದರು. ಇವರ ಜತೆಗಾರರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಮತ್ತಷ್ಟು ಶಂಕಿತರನ್ನು ಬಂಧಿಸಲು ಬೇರೆ ಬೇರೆ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ’ ಎಂದು ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

‘ಲಖನೌನ ಹೊರವಲಯದಲ್ಲಿ ಇರುವ ಕಾಕೋರಿ ಪ್ರದೇಶದ ಮನೆಯೊಂದರಲ್ಲಿ ಶಂಕಿತ ಉಗ್ರರು ಅಡಗಿದ್ದರು. ನಿಖರ ಮಾಹಿತಿ ಮೇರೆಗೆ ಅಲ್ಲಿ ಶೋಧ ಕಾರ್ಯ ನಡೆಸಲಾಯಿತು. ಇವರಿಬ್ಬರು ಸಿಕ್ಕಿಬಿದ್ದರು. ಬಂಧಿತ ಮಿನಾಜ್ ಮತ್ತು ಮುಶೀರ್ ಅವರಿಗೆ ಪಾಕಿಸ್ತಾನದ ಪೆಷಾವರ ಮತ್ತು ಕ್ವೆಟ್ಟಾದಿಂದ ನಿರ್ದೇಶನಗಳು ಬರುತ್ತಿದ್ದವು’ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.