ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೇಠಿ: ಬೈಕ್ ಅಪಘಾತದಲ್ಲಿ ಅಣ್ಣ–ತಂಗಿ ಸಾವು

Published 29 ಏಪ್ರಿಲ್ 2024, 6:43 IST
Last Updated 29 ಏಪ್ರಿಲ್ 2024, 6:43 IST
ಅಕ್ಷರ ಗಾತ್ರ

ಅಮೇಠಿ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಾಘತದಿಂದ ಅಣ್ಣ–ತಂಗಿ ಸಾವಿಗೀಡಾಗಿ ಇನ್ನು ಮೂವರು ಗಾಯಗೊಂಡಿದ್ದಾರೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ಮೋಹನ್‌ಗಂಜ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಸೂರಜ್ ಕುಮಾರ್ (29), ಅವರ ಸಹೋದರಿ ರೀಟಾ ದೇವಿ (18) ಹಾಗೂ ತಾಯಿ ನಂಕಾ ದೇವಿ (60) ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಸಂಜಯ್‌ ಕುಮಾರ್ (25) ಹಾಗೂ ಮನೀಶ್ ಕುಮಾರ್‌ (24) ಪ್ರಯಾಣಿಸುತ್ತಿದ್ದರು.

ಸೂರಜ್ ಹಾಗೂ ರೀಟಾ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಉಳಿದವರನ್ನು ಚಿಕಿತ್ಸೆಗಾಗಿ ರಾಯ್‌ ಬರೇಲಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ‍ಪರೀಕ್ಷೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT