ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬುಧವಾರ ಟ್ವೀಟ್ ಮಾಡಿದ್ದು, ಪರೀಕ್ಷೆಯಲ್ಲಿ ಕೋವಿಡ್–19 ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.

ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದೆ.

'ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ನಾನು ಕೋವಿಡ್–19 ಪರೀಕ್ಷೆಗೆ ಒಳಗಾದೆ, ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದುರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್ ಆಗಿ ನಡೆಸುತ್ತಿದ್ದೇನೆ' ಎಂದು ಬುಧವಾರ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಮಂಗಳವಾರದ ಟ್ವೀಟ್‌ನಲ್ಲಿ 'ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.