ಬಾಂದಾ (ಉತ್ತರ ಪ್ರದೇಶ): ಯುವತಿ ಮತ್ತು ಆಕೆಯ ಪ್ರಿಯಕರನನ್ನು ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಕಾರ್ಚಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಇದು ಮರ್ಯಾದೆಗೇಡು ಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

‘ಯುವತಿಯ ಕುಟುಂಬದವರೇ ಈ ಕೃತ್ಯವೆಸಗಿದ್ದಾರೆ. ಇಬ್ಬರನ್ನು ಗುಡಿಸಲಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. 23 ವರ್ಷದ ಭೋಲಾ, ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. 19 ವರ್ಷದ ಪ್ರಿಯಾಂಕ ಅವರ ದೇಹವು ಶೇಕಡ 80ರಷ್ಟು ಸುಟ್ಟು ಹೋಗಿತ್ತು. ವೈದ್ಯರ ಸಲಹೆ ಮೇರೆಗೆ ಅವರನ್ನು ಕಾನ್ಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.

‘ಘಟನೆಗೆ ಸಂಬಂಧಿಸಿದಂತೆ ಯುವತಿಯ ಕುಟುಂಬದ ಒಂಬತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪೈಕಿ ಮೂವರನ್ನು ಬಂಧಿಸಲಾಗಿದೆ. ಉಳಿದವರನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.