ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಕಾರ್ಯಕ್ರಮದಲ್ಲಿ ಪಟಾಕಿ ಸ್ಫೋಟ, ಇಬ್ಬರು ಸಾವು

Published 15 ಫೆಬ್ರುವರಿ 2024, 2:36 IST
Last Updated 15 ಫೆಬ್ರುವರಿ 2024, 2:36 IST
ಅಕ್ಷರ ಗಾತ್ರ

ಬಂದಾ(ಉತ್ತರ ಪ್ರದೇಶ): ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಪಟಾಕಿ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿತ್ರಕೂಟದ ಇಂಟರ್‌ ಕಾಲೇಜು ಮೈದಾನದಲ್ಲಿ ಪ್ರವಾಸೋದ್ಯಮ ಇಲಾಖೆಯು ಎರಡು ದಿನಗಳ ‘ಬುಂದೇಲ್‌ಖಂಡ ಗೌರವ ಮಹೋತ್ಸವ‘ವನ್ನು ಆಯೋಜಿಸಿತ್ತು. ಈ ವೇಳೆ ದುರ್ಘಟನೆ ನಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅಭಿಷೇಕ್ ಬುಧವಾರ ಹೇಳಿದ್ದಾರೆ.

ವೇದಿಕೆಯ ಹಿಂಭಾಗದಲ್ಲಿ ಪಟಾಕಿ ಬಾಕ್ಸ್‌ಗಳನ್ನು ಇಡಲಾಗಿತ್ತು. ಏಕಾಏಕಿ ಪಟಾಕಿಗಳು ಸಿಡಿದಿದ್ದರಿಂದ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟರೆ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ನೆರವು ನೀಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಆದಿತ್ಯನಾಥ್‌ ಸೂಚನೆ ನೀಡಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT