ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನ ಸಾವು!

ಧಾರ್ಮಿಕ ಸತ್ಸಂಗ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 100 ಕ್ಕೂ ಅಧಿಕ ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ.
Published 2 ಜುಲೈ 2024, 11:32 IST
Last Updated 2 ಜುಲೈ 2024, 13:47 IST
ಅಕ್ಷರ ಗಾತ್ರ

ಹತ್ರಾಸ್, ಉತ್ತರಪ್ರದೇಶ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 100 ಕ್ಕೂ ಅಧಿಕ ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ಮೃತರಲ್ಲಿ ಬಹುತೇಕರು ಮಹಿಳೆಯರು, ಮಕ್ಕಳೇ ಆಗಿದ್ದಾರೆ. ಇದುವರೆಗೆ ಐವತ್ತಕ್ಕೂ ಹೆಚ್ಚು ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಹತ್ರಾಸ್ ಎಎಸ್‌ಪಿ ಮಾಹಿತಿ ನೀಡಿದ್ದಾರೆ.

ಈ ಘಟನೆ ಹತ್ರಾಸ್ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಬಾಬಾ ಅವರ ಧಾರ್ಮಿಕ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇಥಹಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎನ್ನಲಾಗಿದೆ. ಕೆಲ ಖಾಸಗಿ ವಾಹಿನಿಗಳು 120 ಜನ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ.

ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಘಾತ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ಸರ್ಕಾರ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಸಿಎಂ ಯೋಗಿ ಅವರು ಪೂರ್ವನಿರ್ಧರಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ಹತ್ರಾಸ್‌ಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT