ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Hathras Stampede | ಮೃತರ ಸಂಖ್ಯೆ 121ಕ್ಕೆ ಏರಿಕೆ

Published 3 ಜುಲೈ 2024, 4:05 IST
Last Updated 3 ಜುಲೈ 2024, 4:05 IST
ಅಕ್ಷರ ಗಾತ್ರ

ಹಾಥರಸ್: ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಸಿಕಂದಾ ರಾವ್ ಪ್ರದೇಶದ ಫೂಲರಾಯ್ ಗ್ರಾಮದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಥರಸ್‌ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಮಂಗಳವಾರ ಭೋಲೆಬಾಬಾ ಅವರ 'ಸತ್ಸಂಗ' ಕಾರ್ಯಕ್ರಮದಲ್ಲಿ ಕಾಲ್ತುಳಿತ ದುರಂತ ಸಂಭವಿಸಿತ್ತು. ಮಂಗಳವಾರ ಸಂಜೆ 3.30ರ ಸುಮಾರಿಗೆ ಬಾಬಾ ನಿರ್ಗಮಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮೃತಪಟ್ಟವರ ಪೈಕಿ ಬಹುತೇಕರನ್ನು ಗುರುತಿಸಲಾಗಿದ್ದು, 19 ಮೃತದೇಹಗಳನ್ನು ಇನ್ನಷ್ಟೇ ಗುರುತಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರ್ಮಿಕ ಸಭೆ ಆಯೋಜಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT