ಸುಲ್ತಾನ್‌ಪುರ (ಉ.ಪ್ರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ.
.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ನ್ಯಾಯಮೂರ್ತಿಗಳ ನಿಯೋಜನೆ ಆಗದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ.

‘ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ನಿಗದಿಯಾಗದ ಕಾರಣ ಮುಂದೂಡಲಾಯಿತು. ಮೇ 14ರಂದು ವಿಚಾರಣೆ ನಡೆಯಲಿದೆ‘ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.
.ಈ ಹಿಂದೆ ಮೀಸಲಾತಿ ವಿರೋಧಿಸಿದ್ದ ಆರ್ಎಸ್ಎಸ್: ರಾಹುಲ್ ಗಾಂಧಿ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಫೆಬ್ರುವರಿ 20ರಂದು ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.
.ಬಿಲಿಯನೇರ್ ಉದ್ಯಮಿ ಮಿತ್ರರಿಗಾಗಿ ಸರ್ಕಾರ ನಡೆಸುತ್ತಿರುವ ಮೋದಿ: ರಾಹುಲ್ ಗಾಂಧಿ .
2018ರ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು.
.ಮೋದಿ ಸರ್ಕಾರದಿಂದ ಜನರಿಗೆ ಆದ ಅನ್ಯಾಯ ನಾವು ಸರಿ ಮಾಡಲಿದ್ದೇವೆ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.