ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪ್ರಕರಣಗಳು ಇಳಿಕೆ; ರಾತ್ರಿ ಕರ್ಫ್ಯೂ ನಿರ್ಬಂಧ ತೆಗೆದುಹಾಕಿದ ಉತ್ತರಪ್ರದೇಶ

Last Updated 19 ಫೆಬ್ರುವರಿ 2022, 9:45 IST
ಅಕ್ಷರ ಗಾತ್ರ

ಲಖನೌ: ಕೋವಿಡ್–19 ಹೊಸ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ನಿರ್ಬಂಧವನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಹಾಕಿದೆ.

ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 842 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ20,63,9041 ತಲುಪಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ವಾರದಿಂದ ಈಚೆಗೆ ಗಣನೀಯವಾಗಿ ಇಳಿಕೆಯಾಗಿದ್ದು, ಇನ್ನು ‌ಕೇವಲ8,683 ಪ್ರಕರಣಗಳಷ್ಟೇ ಬಾಕಿ ಇವೆ.

ದೇಶದಲ್ಲಿಯೂ ಹೊಸ ಪ್ರಕರಣಗಳ ಪ್ರಮಾಣ ಕುಸಿದಿದೆ.ಶನಿವಾರ ಹೊಸದಾಗಿ 22,270 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 325 ಸೋಂಕಿತರು ಮೃತಪಟ್ಟಿದ್ದು,60,298 ಮಂದಿ ಗುಣಮುಖರಾಗಿದ್ದಾರೆಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ4,28,02,505 ಆಗಿದ್ದು, ಸಾವಿನ ಸಂಖ್ಯೆ5,11,230ಕ್ಕೆ ತಲುಪಿದೆ. ಸಕ್ರಿಯೆ ಪ್ರಕರಣಗಳ ಸಂಖ್ಯೆ2,53,739ಗೆ ಇಳಿದಿದೆ ಎಂದೂ ಮಾಹಿತಿ ನೀಡಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT