ಲಖನೌ: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಗ್ರಾಮವೊಂದರಲ್ಲಿ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ತಲೆ ಕತ್ತರಿಸಿ ಕೊಲೆ ಮಾಡಿದ್ದಾರೆ. ತಲೆಯನ್ನು ಹಿಡಿದು ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆತನ ವರ್ತನೆಯನ್ನು ನೋಡಿದ ಸ್ಥಳೀಯರು ಅಘಾತಕ್ಕೊಳಗಾಗಿದ್ದರು.

ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಪಾಂಡೇತರ ಗ್ರಾಮದಲ್ಲಿ ಸರ್ವೇಶ್ ಕುಮಾರ್ ಅವರು ಮಗಳ ರುಂಡ ಕಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಸ್ಥಳೀಯ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಮಗಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಹಾಗಾಗಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯ ರುಂಡ ಬೇರ್ಪಡಿಸಿ ಹತ್ಯೆ ಮಾಡಿದ್ದೇನೆ. ದೇಹ ಮನೆಯಲ್ಲಿ ಬಿದ್ದಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

2019ರಲ್ಲಿ ಅತಿ ಹೆಚ್ಚು ಅಪರಾಧ ಪ್ರಕರಣ ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಅಂಕಿ ಅಂಶ ಬಿಡುಗಡೆ ಮಾಡಿತ್ತು.

ಪೋಕ್ಸೊ ಕಾಯ್ದೆಯಡಿ ಇದುವರೆಗೂ ಉತ್ತರ ಪ್ರದೇಶದಲ್ಲಿ 7,444, ಮಹಾರಾಷ್ಟ್ರದಲ್ಲಿ 6,402, ಮಧ್ಯಪ್ರದೇಶ 6,053 ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.