‘ಸೆಪ್ಟೆಂಬರ್ 18ರ ರಾತ್ರಿ ಕೈಲಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಶಾ ಚಂದ್ರ ಹೇಳಿದ್ದಾರೆ.
ಫೆಬ್ರುವರಿಯಲ್ಲಿ ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಮುಖ ಆರೋಪಿ ರಿಂಕು (20) ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ತಿಂಗಳಾರಂಭದಲ್ಲಿ ಆರೋಪಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಎಂದು ಅವರು ತಿಳಿಸಿದ್ದಾರೆ.
ಬಾಲಕಿ ತನ್ನ ಸಹೋದರ ಮತ್ತು ತಾಯಿಯೊಂದಿಗೆ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ದಾಖಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.