‘ಕೋವಿಡ್ ಪಿಡುಗಿನ ಅವಧಿಯಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆ ಹೇಗಿತ್ತು ಎಂದು ಎಲ್ಲರೂ ನೋಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣ. ಈ ಹಿನ್ನೆಲೆಯಲ್ಲಿ ಜನರಿಗೆ ಉತ್ತಮ ಹಾಗೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವುದಕ್ಕಾಗಿ ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ,ಚುನಾವಣಾ ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ ₹10 ಲಕ್ಷದವರೆಗೂ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಪಕ್ಷ ನಿರ್ಧರಿಸಿದೆ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.