ಲಖನೌ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭೀಕರ ಚಂಡಮಾರುತ ಮತ್ತು ಮಳೆ ಸಂಬಂಧಿತ ಅವಘಡಗಳಿಂದಾಗಿ 111 ಮಂದಿ ಮೃತಪಟ್ಟಿದ್ದು, 72 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಳಿಯ ವೇಗಕ್ಕೆ ವಿವಿಧ ಪ್ರದೇಶಗಳಲ್ಲಿ ಮರಗಳು ಧರೆಗುರುಳಿವೆ ಮತ್ತು ನೂರಾರು ಮನೆಗಳು ಹಾನಿಗೊಳಗಾಗಿವೆ ಎಂದು ಸರ್ಕಾರ ಪ್ರಕಟಣೆ ತಿಳಿಸಿದೆ.

‘ಮೇ 13ರಂದು ಸಂಭವಿಸಿದ ಚಂಡಮಾರುತ, ಆಲಿಕಲ್ಲು ಮಳೆ ಸೇರಿದಂತೆ ಪ್ರತಿಕೂಲ ಹವಾಮಾನದಿಂದಾಗಿ 26 ಜಿಲ್ಲೆಗಳಲ್ಲಿ 111 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧೆಡೆ 72 ಜನರು ಗಾಯಗೊಂಡಿದ್ದಾರೆ. ಅಲ್ಲದೆ, 170 ಜಾನುವಾರುಗಳ ಸಾವಿಗೀಡಾಗಿದ್ದು, 227 ಮನೆಗಳಿಗೆ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗ್ರಾಜ್ ಜಿಲ್ಲೆಯಲ್ಲಿ 24, ಭದೋಹಿ ಜಿಲ್ಲೆಯಲ್ಲಿ 16, ಫತೇಪುರ್ ಜಿಲ್ಲೆಯಲ್ಲಿ 9, ಖಾಗಾ ತಹಸಿಲ್ನಲ್ಲಿ 8, ಪ್ರತಾಪ್ಗಢ ಜಿಲ್ಲೆಯಲ್ಲಿ 4, ಕಾನ್ಪುರ ಮತ್ತು ರಸೂಲಾಬಾದ್ ಪ್ರದೇಶದಲ್ಲಿ ಇಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಸಂತ್ರಸ್ತರಿಗೆ ಪರಿಹಾರ ಘೋಷಣೆ: ಅಕಾಲಿಕ ಗುಡುಗು ಸಹಿತ ಮಳೆ ಮತ್ತು ಸಿಡಿಲಿನಿಂದ ಹಾನಿಗೊಳಗಾದ ಜನರಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳ ಒಳಗೆ ಪರಿಹಾರ ನೀಡಬೇಕೆಂದು ಅವರು ಸೂಚಿಸಿದ್ದಾರೆ.

ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ ಮುಖ್ಯಮಂತ್ರಿ, ಕೃಷಿ ಮತ್ತು ಕಂದಾಯ ಇಲಾಖೆಗಳು ತಕ್ಷಣವೇ ಬೆಳೆ ಹಾನಿ ಮತ್ತು ಆಸ್ತಿ ಪಾಸ್ತಿ ಹಾನಿಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.