ಲಖನೌ: ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ಇದೇ 24ರಂದು ನಡೆಯುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಯಾಗಿ ನಿಯೋಜಿತರಾಗಿರುವ ಯೋಗಿ ಆದಿತ್ಯನಾಥ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಲುವಾಗಿ ಸಭೆ ಆಯೋಜಿಸಲಾಗುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸಭೆಯ ದಿನಾಂಕವನ್ನು ಇನ್ನಷ್ಟೇ ನಿರ್ಧರಿಸಬೇಕಿದೆ. ಮಾರ್ಚ್ 21ರಂದು ಬಿಜೆಪಿ ಶಾಸಕರ ಸಭೆ ನಿಗದಿ ಆಗಿತ್ತು. ಆದರೆ ಅದನ್ನು ಮುಂದೂಡಲಾಯಿತು ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವೀಕ್ಷಕರನ್ನಾಗಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಉಪ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ.

ಸರ್ಕಾರ ರಚನೆ: ಪ್ರಧಾನಿ ನಿವಾಸದಲ್ಲಿ ಸಭೆ
ನವದೆಹಲಿ (ಪಿಟಿಐ): ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಗೋವಾದಲ್ಲಿ ಹೊಸ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಹಿರಿಯ ಮುಖಂಡರಾದ ಅಮಿತ್ ಶಾ, ರಾಜನಾಥ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಪ್ರಧಾನಿ ನಿವಾಸದಲ್ಲಿ ಭಾನುವಾರ ರಾತ್ರಿ ಸಭೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.