ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಅಪಹರಣ–ಕೊಲೆ: ನಾಲ್ವರು ಪೊಲೀಸರ ಅಮಾನತು

Last Updated 24 ಜುಲೈ 2020, 10:49 IST
ಅಕ್ಷರ ಗಾತ್ರ

ಲಖನೌ: ಕಾನ್ಪುರದಲ್ಲಿನ ಪ್ರಯೋಗಾಲಯದ ತಂತ್ರಜ್ಞರೊಬ್ಬರ ಅಪಹರಣ ಮತ್ತು ಹತ್ಯೆ ಕುರಿತ ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಸರ್ಕಲ್‌ ಆಫೀಸರ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

‘ಅಪಹೃತರ ಕುಟುಂಬದವರು ಒತ್ತೆ ಹಣವನ್ನು ನೀಡಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಎಡಿಜಿಪಿ ಬಿ.ಪಿ. ಜೋಗದಂಡ ಅವರು ತನಿಖೆ ನಡೆಸಲಿದ್ದಾರೆ’ ಎಂದೂ ಸರ್ಕಾರ ಶುಕ್ರವಾರ ಹೇಳಿದೆ.

ಕಳೆದ ತಿಂಗಳಿನಲ್ಲಿ ಲ್ಯಾಬ್‌ ತಂತ್ರಜ್ಞರೊಬ್ಬರನ್ನು ಅಪಹರಿಸಿದ್ದ ಅಪರಿಚಿತರು, ಕೆಲವೇ ದಿನಗಳಲ್ಲಿ ಅವರ ಹತ್ಯೆ ನಡೆಸಿದ್ದರು. ಅಪಹೃತರ ಬಿಡುಗಡೆಗಾಗಿ ಪೊಲಿಸರ ಸಮ್ಮುಖದಲ್ಲೇ ₹30 ಲಕ್ಷ ಒತ್ತೆ ಹಣ ನೀಡಲಾಗಿತ್ತು ಎಂದು ಅವರ ಕುಟುಂಬದವರು ಹೇಳಿದ್ದಾರೆ. ಆದರೆ, ಕುಟುಂಬದವರು ಸುಳ್ಳು ಹೇಳುತ್ತಿದ್ದಾರೆ ಎಂದು ಸರ್ಕಲ್‌ ಆಫೀಸರ್‌ ವಿಕಾಸ್‌ ಪಾಂಡೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ವಶಪಡಿಸಿಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಅವರಲ್ಲಿ ಇಬ್ಬರು ತಾವು ಈ ಕೃತ್ಯದಲ್ಲಿ ಪಾಲ್ಗೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಕಾನ್ಪುರದ ಎಸ್‌ಪಿ ದಿನೇಶ್‌ ಕುಮಾರ್‌ ಪ್ರಭು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT