ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರಾಖಂಡದಲ್ಲಿ ₹8,260 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯ ಸ್ಥಾಪನೆಗೊಂಡು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕುಡಿಯುವ ನೀರು, ನೀರಾವರಿ, ತಾಂತ್ರಿಕ ಶಿಕ್ಷಣ, ಇಂಧನ, ನಗರಾಭಿವೃದ್ಧಿ ಹಾಗೂ ಕ್ರೀಡೆ ಹಾಗೂ ಕೌಶಲ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಿದರು.

ಇದೇ ವೇಳೆ ‘ಅಮೃತ್ ಯೋಜನೆ’ ಅಡಿಯಲ್ಲಿ ಡೆಹ್ರಾಡೂನ್ನ 23 ವಲಯಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆ, ಪಿಥೋರಗಢದಲ್ಲಿ ಇಲೆಕ್ಟ್ರಿಕಲ್ ಸಬ್ ಸ್ಟೇಷನ್, ಸರ್ಕಾರಿ ಕಚೇರಿಗಳಲ್ಲಿ ಸೌರ ವಿದ್ಯುತ್ ಯೋಜನೆ, ನೈನಿತಾಲ್ನ ಹಲ್ದ್ವಾನಿ ಕ್ರೀಡಾಂಗಣದಲ್ಲಿ ಅಸ್ಟ್ರೋಟರ್ಫ್ ಹಾಕಿ ಮೈದಾನವನ್ನು ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.